ಅನ್ನಭಾಗ್ಯ ಯೋಜನೆ  ಅಕ್ಕಿ ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ; ಮಂಗಳೂರಿನಲ್ಲಿ ಮೂಟೆಗಟ್ಟಲೆ ರೇಷನ್ ಅಕ್ಕಿ ಪತ್ತೆ

Ravi Talawar
 ಅನ್ನಭಾಗ್ಯ ಯೋಜನೆ  ಅಕ್ಕಿ  ಬೇರೆ ಬ್ರ್ಯಾಂಡ್​ಗಳ ಹೆಸರಿನಲ್ಲಿ ಮಾರಾಟ ಶಂಕೆ; ಮಂಗಳೂರಿನಲ್ಲಿ ಮೂಟೆಗಟ್ಟಲೆ ರೇಷನ್ ಅಕ್ಕಿ ಪತ್ತೆ
WhatsApp Group Join Now
Telegram Group Join Now

ಮಂಗಳೂರು, ಏಪ್ರಿಲ್ 30: ಬಡವರು ಮೂರು ಹೊತ್ತು ಉಪವಾಸ ಕೂರಬಾರದೆಂದು ಕರ್ನಾಟಕ ಕಾಂಗ್ರೆಸ್ ಸರ್ಕಾರ  ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ ಈ ಯೋಜನೆ ಮೂಲಕ ಸಿಗುವ ಅಕ್ಕಿ ಅನ್ಯರ ಪಾಲಾಗುತ್ತಿದೆ. ಇದಕ್ಕೆ ಸಾಕ್ಷಿಯೆನ್ನುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ.

ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಟ ಮಾಫಿಯಾ ಸಕ್ರಿಯವಾಗಿರುವ ಅನುಮಾನವಿದೆ. ದಲ್ಲಾಲಿಗಳ ಮೂಲಕ ಅಕ್ರಮವಾಗಿ ಅಕ್ಕಿ ಖರೀದಿಸಿ ಮಂಗಳೂರಿನ ಕೆಲ ಖಾಸಗಿ ರೈಸ್ ಮಿಲ್‌ಗಳಿಗೆ ಸಾಗಾಟ ಮಾಡುತ್ತಿರುವ ಶಂಕೆಯಿದೆ. ಬಳಿಕ ಫಾಲಿಶ್ ಮಾಡಿ ಬೇರೆ ಬೇರೆ ಬ್ರ್ಯಾಂಡ್ ಹೆಸರಿನಲ್ಲಿ ಮಾರುಕಟ್ಟೆಗೆ ಪೂರೈಕೆ ಮಾಡುವ ಮಾಫಿಯಾ ಕಾರ್ಯಚರಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಹೀಗಾಗಿ ಗೋಡೌನ್​ನಲ್ಲಿದ್ದ ವಿವಿಧ ಅಕ್ಕಿಗಳ ಮಾದರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಇನ್ನು ಗೋಡೌನ್‌ನಲ್ಲಿ ಲೇಬಲ್ ಇಲ್ಲದ 500 ಕ್ವಿಂಟಾಲ್ ಗೂ ಹೆಚ್ಚು ಅಕ್ಕಿ ದಾಸ್ತಾನು ಇರಿಸಿರುವುದು ಕಂಡು ಬಂದಿದ್ದು ಇದು ಅನುಮಾನಕ್ಕೆ ಕಾರಣವಾಗಿದೆ.
WhatsApp Group Join Now
Telegram Group Join Now
Share This Article