ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಆಗಸ್ಟ್ 15 ರ ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಆಗಸ್ಟ್ 14 ರ ಸಂಜೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಸ್ವಾತಂತ್ರ್ಯೋತ್ಸವದ ಸಾರ್ಥಕತೆಯನ್ನು ಬಿಂಬಿಸುವ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆ ಹಾಗೂ ಯುವ ಸಮೂಹ ಸಕ್ರೀಯವಾಗಿ ಭಾಗವಹಿಸುವಂತೆ ರೂಪರೇಷೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಿಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಕ್ರೀಯವಾಗಿ ಭಾಗವಹಿಸಬೇಕು. ನಮಗೆ ಸ್ವಾತಂತ್ರ್ಯ ದೊರಕಿದ ಘಳಿಗೆಯನ್ನು ಸ್ಮರಿಸಲು ಆಗಸ್ಟ್ 14 ರ ಸಂಜೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರಿಗೆ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಅವಳಿ ಮಹಾನಗರದ ಎಲ್ಲ ಕಾಲೇಜು ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿದ್ಯಾರ್ಥಿನೀಯರು ಭಾಗವಹಿಸಬೇಕು. ಪ್ರತಿ ಕಾಲೇಜು ಸ್ವಾತಂತ್ರ್ಯವನ್ನು ಸ್ಮರಿಸುವ ಕಾರ್ಯಕ್ರಮ ನೀಡಬೇಕೆಂದು ಸಚಿವ ಸಂತೋಷ ಲಾಡ್ ಸೂಚಿಸಿದರು.
ಇಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯದ, ಸಂವಿಧಾನದ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮನಮುಟ್ಟುವಂತೆ ಅರಿವು ಮೂಡಿಸಬೇಕಾಗಿದೆ. ಜಗತ್ತಿನ ಅತೀ ಶ್ರೇಷ್ಠ ಸಂವಿಧಾನ ಮತ್ತು ಸಂಸದೀಯ ವ್ಯವಸ್ಥೆಯನ್ನು ಹೊಂದಿರುವ ನಾವು ನಮ್ಮ ಯುವಕರಿಗೆ ಸ್ವಾತಂತ್ರ್ಯದ ಇತಿಹಾಸವನ್ನು ಮನವರಿಕೆ ಮಾಡುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಆಯೋಜನೆಯಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಮುಂಬರುವ ಆಗಸ್ಟ್ 15 ರಂದು ಜಿಲ್ಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತೀ ವಿಜೃಂಬನೆಯಿಂದ ಆಚರಿಸಲು ಉದ್ದೇಶಿಸಲಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ ಯುವ ಸಂಭ್ರಮ-2025 ಎಂಬ ವಿನೂತನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಗಸ್ಟ್ 14 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ವಿಶ್ವವಿದ್ಯಾಲಯಗಳು ಹಾಗೂ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಆಗಸ್ಟ್ 15 ರ ಬೆಳಿಗ್ಗೆ 7:30 ಗಂಟೆಗೆ ಎಲ್ಲಾ ಶಾಲೆ, ಕಾಲೇಜು, ಸಂಘ ಸಂಸ್ಥೆ ಹಾಗೂ ಸರಕಾರಿ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರುತ್ತದೆ. 8:30 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಹಾಗೂ ಸರಕಾರಿ ನೌಕರರು ಸಮಾವೇಶಗೊಳ್ಳುತ್ತಾರೆ. 8:55 ಗಂಟೆಗೆ ಮುಖ್ಯ ಅತಿಥಿಗಳು ಕ್ರೀಡಾಂಗಣಕ್ಕೆ ಆಗಮಿಸಿ, 9 ಗಂಟೆಗೆ ಮುಖ್ಯ ಅತಿಥಿಗಳಿಂದ ಸಾರ್ವಜನಿಕ ಧ್ವಜಾರೋಹಣ ಹಾಗೂ ವಿವಿಧ ದಳಗಳ ವೀಕ್ಷಣೆ ನಡೆಯುತ್ತದೆ. ನಂತರ 9:15 ಗಂಟೆಗೆ ಮುಖ್ಯ ಅತಿಥಿಗಳು ಸ್ವಾತಂತ್ರೋತ್ಸವ ಸಂದೇಶ ನೀಡುತ್ತಾರೆ. ಮತ್ತು 9:30 ಗಂಟೆಗೆ ವಿವಿಧ ದಳಗಳಿಂದ ಗೌರವರಕ್ಷೆ ಸ್ವೀಕರಿಸುತ್ತಾರೆ. ನಂತರ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗುತ್ತವೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನವಾದ ಆಗಸ್ಟ್ 14 ರಿಂದ ಆಗಸ್ಟ್ 16 ರವರೆಗೆ (3-ದಿನ) ಎಲ್ಲ ಸರಕಾರಿ ಕಟ್ಟಡಗಳ ಹಾಗೂ ಸಾರ್ವಜನಿಕ ಮುಖ್ಯ ವ್ಯತ್ತಗಳಲ್ಲಿ ಮತ್ತು ಧಾರವಾಡ ನಗರದ ಜುಬಲಿ ಸರ್ಕಲ್, ಕೋರ್ಟ್ ಸರ್ಕಲ್ ಹಾಗೂ ಕಾರ್ಗಿಲ್ ಸ್ತೂಪ್‍ದಲ್ಲಿ, ಕೆ.ಸಿ.ಡಿ. ಕಾಲೇಜು ವೃತ್ತ, ಡೆಪ್ಯೂಟಿ ಚನ್ನಬಸಪ್ಪ ಪ್ರತಿಮೆ, ಕೆ.ಜಿ. ಕುಂದಣಗಾರ ಪ್ರತಿಮೆ, ಹಾಗೂ ಹೆಡ್ ಪೆÇೀಸ್ಟ್ ಹತ್ತಿರದ ವೃತ್ತದಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಹೇಳಿದರು.
ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಜಿಲ್ಲಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಆಯಾ ಇಲಾಖೆಯ ಅಧಿಕಾರಿಗಳು ಸೂಚಿಸಬೇಕು. ಸರ್ಕಾರಿ ನೌಕರರ ಹಾಜರಾತಿಯನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪಡೆದು ಮರುದಿನ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸ್ವಾತಂತ್ರ್ಯೋತ್ಸವದ ಸಂದೇಶಕ್ಕೆ ಅಗತ್ಯವಿರುವ ಮಾಹಿತಿಯನ್ನು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ತಯಾರಿಸಿ, ಆಗಸ್ಟ್ 06 ರ ಸಂಜೆಯೊಳಗೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಯವರಿಗೆ ಇ-ಮೇಲ್ [email protected] ಮೂಲಕ ಕಳುಹಿಸಬೇಕು. ಮತ್ತು ಅದರ ಒಂದು ಪ್ರತಿಯನ್ನು ಉಪಕಾರ್ಯದರ್ಶಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9480864001 ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2742221 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು. ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಸೇರಿದಂತೆ ಇತರರು ಇದ್ದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾಂಸ್ಕøತಿಕ ಹಾಗೂ ಕಲಾ ತಜ್ಞರು ಭಾಗವಹಿಸಿದ್ದರು.