ಬಳ್ಳಾರಿ:27. ಕುಡಿಯುವ ನೀರಿನ ಮೂಲಗಳನ್ನು ನಿಯಮಿತವಾಗಿ ಪರೀಕ್ಷೆಗೆ ಒಳಪಡಿಸಬೇಕು. ಕಲುಷಿತ ನೀರಿನಿಂದ ೫ಕ್ಕಿಂತ ಹೆಚ್ಚುಬಾರಿ ವಾಂತಿ ಬೇಧಿ ಪ್ರಕರಣಗಳು ಕಂಡುಬAದಲ್ಲಿ ತೀವ್ರ ಅತಿಸಾರಬೇಧಿ ಉಲ್ಬಣ ಎಂದು ಪರಿಗಣಿಸಲಾಗುತ್ತದೆ. ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಸೂಚಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ಕುರಿತು ೨ನೇ ತ್ರೆöÊಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ವಾಂತಿ ಬೇಧಿ ಪ್ರಕರಣಗಳು ಕಂಡುಬರದAತೆ ಎಚ್ಚರವಹಿಸಲು ಸೂಚಿಸಿದರು.
ಮಹಾನಗರಪಾಲಿಕೆ ಆಯುಕ್ತ ಮಲ್ಲನಗೌಡ ಮಾತನಾಡಿ, ಕುಡಿಯಲು ಯೋಗ್ಯವಲ್ಲದ ನೀರನ್ನು ಕ್ಲೋರಿನೇಷನ್ ಮಾಡಿಸಿದ ನಂತರ ಸ್ವಚ್ಛ ಶುದ್ದ ಕುಡಿಯುವ ನೀರು ಪೂರೈಕೆ ಕುರಿತು ಮಹಾನಗರ ಪಾಲಿಕೆ ವತಿಯಿಂದ ತೆಗೆದುಕೊಳ್ಳುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಮಿನಿಟ್ಯಾಂಕ್ಗಳನ್ನು ಸ್ವಚ್ಛಗೊಳಿಸಲು ಹಾಗೂ ಕ್ಲೋರಿನೇಷನ್ ಮಾಡಿಸಲು ಪಾಲಿಕೆ ಸಿಬ್ಬಂದಿಗೆ ಸೂಚಿಸಿದರು. ಹಾಗೂ ನೀರಿನ ಮೂಲಗಳನ್ನು ಕೆಮಿಕಲ್ ಟೆಸ್ಟ್ ಮಾಡಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ಮಾತನಾಡುತ್ತಾ, ಮಳೆ ದಿನಗಳಲ್ಲಿ ನೀರು ಕಲುಷಿತವಾಗುವ ಸಂದರ್ಭಗಳಿದ್ದು ಹೆಚ್ಚಿನ ಕ್ರಮಹಿಸಿ ಪೈಪ್ ಲೈನ್ಗಳ ದುರಸ್ಥಿಯಿದ್ದಲ್ಲಿ ಸರಿಪಡಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರಿನ್ನು ಪೂರೈಸಲು ಸೂಚಿಸಿದರು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಗ್ರಾಮ ಮಟ್ಟದಲ್ಲಿ ನೀರಿನ ಮೂಲಗಳಿಂದ ಜೈವಿಕ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಿಸಿದ ನೀರಿನ ಮೂಲಗಳನ್ನು ಅಡ್ಡ ತಪಾಸಣೆಗಾಗಿ ಜಿಲ್ಲಾ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುವುದೆಂದು ತಿಳಿಸಿದರು. ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳನ್ನು ಕೂಡಲೇ ಸ್ಥಗಿತಗೊಳಿಸಿ ದುರಸ್ಥಿ ಮಾಡಿಸಿದ ನಂತರ ನೀರನ್ನು ಮರು ಪರೀಕ್ಷೆ ಮಾಡಿಸಿ ಕುಡಿಯಲು ಯೋಗ್ಯವೆಂದು ವರದಿ ಬಂದ ನಂತರ ನೀರನ್ನು ಪೂರೈಸಲು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಶ್ರೀಕಾಂತ್, ಪ್ರದೀಪ್, ಡಾ.ಪ್ರಿಯಾ ಜಿಲ್ಲಾ ಪ್ಲೋರೊಸಿಸ್ ಸಲಹೆಗಾರರು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಜಿಲ್ಲಾ ಕಾಲರಾ ನಿಯಂತ್ರಣ ತಂಡದವರು, ಮಹಾನಗರ ಪಾಲಿಕೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


