ನಮ್ರತಾ ಗೌಡ ಈಗ ಮಹಾನ್

Ravi Talawar
 ನಮ್ರತಾ ಗೌಡ ಈಗ ಮಹಾನ್
WhatsApp Group Join Now
Telegram Group Join Now
     ನಾಗಿಣಿ ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದಿರುವ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
     ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ‘ಮಹಾನ್’ ಚಿತ್ರದ ನಾಯಕನಾಗಿ ಜನಪ್ರಿಯ ನಟ ವಿಜಯ ರಾಘವೇಂದ್ರ ಅಭಿನಯಿಸುತ್ತಿದ್ದು, ನಮ್ರತಾ ಗೌಡ ಪ್ರಮುಖಪಾತ್ರದಲ್ಲಿ
ಬಣ್ಣಹಚ್ಚಿದ್ದಾರೆ.
    ‘ಮಹಾನ್’ ಚಿತ್ರದ ಕುರಿತು ನಟ ನಮ್ರತಾ ಗೌಡ “ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು ‘ಮಹಾನ್’ ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ
ಬದುಕು-ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರದ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್,  ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ” ಎಂದಿದ್ದಾರೆ.
WhatsApp Group Join Now
Telegram Group Join Now
Share This Article