ನ.07 ರಂದು ನೇರ ಸಂದರ್ಶನ

Ravi Talawar
ನ.07 ರಂದು ನೇರ ಸಂದರ್ಶನ
Oplus_131072
WhatsApp Group Join Now
Telegram Group Join Now


ಬಳ್ಳಾರಿ,ನ.05
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ನ.07 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಇನ್ಸಾ÷್ಟಕಾರ್ಟ್ ಸರ್ವೀಸಸ್ ಪ್ರೆöÊವೇಟ್ ಲಿಮಿಟೆಡ್ (INSTAKART SERVICES PRIVATE LIMITED) ಎಂಬ ಕಂಪನಿಯಲ್ಲಿ ಖಾಲಿ ಇರುವ ಡೆಲೆವರಿ ಬಾಯ್ ಮತ್ತು ಕಂಪ್ಯೂಟರ್ ಆಪರೇಟರ್-01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು (ಕಡ್ಡಾಯವಾಗಿ ಬೈಕ್ ಮತ್ತು ಸ್ಮಾರ್ಟ್ ಮೊಬೈಲ್ ಹೊಂದಿರಬೇಕು).
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ಭಾಗವಹಿಸಬಹುದು. ಈ ಅವಕಾಶ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.8277000619, 8197191981 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article