ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Ravi Talawar
 ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
WhatsApp Group Join Now
Telegram Group Join Now

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಗಂಭೀರತೆ ಪರಿಗಣಿಸಿದ್ದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಇದರಿಂದ ಬಂಧನ ಭೀತಿಯಲ್ಲಿರುವ ಬಿಎಸ್​ವೈ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

2024ರ ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ದೂರು ದಾಖಲಿಸಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
Share This Article