ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ

Ravi Talawar
 ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ
WhatsApp Group Join Now
Telegram Group Join Now

ಬೆಂಗಳೂರು: ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಮತ್ತು ವಯನಾಡ್ ರಸ್ತೆಗಳ ನಡುವೆ ರಾತ್ರಿ ಸಂಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ, “ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್​ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ” ಎಂದರು.

“ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್​ ಕಂಪನಿಗಳಿಗೆ ತಿಳಿಸಲಾಗಿದೆ” ಎಂದು ಹೇಳಿದರು.

“ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್​ ಸಾಫ್ಟ್ ರಿಲೀಸ್​ ಸೆಂಟರ್​) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್​ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article