ಬಳ್ಳಾರಿ,ಫೆ.05 -2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.5875 ರಂತೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಶಾಖೆ ಇವರ ಮೂಲಕ ರೈತರಿಂದ ಖರೀದಿಸಲು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿ ನಗರದ ಮಾರುತಿ ನಗರದ 2ನೇ ಕ್ರಾಸ್ ನ ಎಸ್.ಪಿ ವೃತ್ತ ಹತ್ತಿರದ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9535380789) ಮತ್ತು ಸಿರುಗುಪ್ಪ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-1(ಮೊ.9845166601). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಮೊ.9449664453.
*ಬೇಕಾದ ಅಗತ್ಯ ದಾಖಲೆ:*
2025-26ನೇ ಸಾಲಿನ ಪಹಣಿ ಪತ್ರ, ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ.
ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಲು ತಿಳಿಸಿದೆ.
ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಜ.29 ರಿಂದ ರಿಂದ 80 ದಿನಗಳೊಳಗೆ ನೋಂದಣಿ ಮಾಡಿಸತಕ್ಕದ್ದು, ಹಾಗೂ ನೋಂದಣಿ ಚೀಟಿ ಪಡೆಯುವುದು. ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು.
ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಪ್ರಮಾಣದಷ್ಟು ಕಡಲೆಕಾಳು ಉತ್ಪನ್ನವನ್ನು 90 ದಿನಗಳವರೆಗೆ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ಜಿಲ್ಲೆಯ ರೈತರು ಬೆಂಬಲಬೆಲೆ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಲು ಕೋರಿದೆ. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರ ಆರಂಭ


