ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಮರಕುಂಬಿ ಗ್ರಾಮದ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ದುರಂತದಲ್ಲಿ ಗಾಯಗೊಂಡಿದ್ದವರಲ್ಲಿ ಇಂದು ಮತ್ತೆ ನಾಲ್ವರು ಮೃತರಾಗಿದ್ದು, ಈಗ ಒಟ್ಟು ಮೃತರ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ.
ಕಾರ್ಖಾನೆಯ ನಂಬರ್ 1ರ ಕಂಪಾರ್ಟ್ಮೆಂಟ್ನಲ್ಲಿ ನಿನ್ನೆ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಾಲ್ ರಿಪೇರಿ ಮಾಡುವಾಗ ಸ್ಫೋಟವಾಗಿತ್ತು. ಸ್ಫೋಟಗೊಂಡು ಕುದಿಯುವ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದಿತ್ತು. ಅದರ ಪರಿಣಾಮ 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.ಗಂಭೀರವಾಗಿ ಗಾಯಗೊಂಡವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿನ್ನೆ ಮೂವರು ಮೃತರಾಗಿದ್ದರು. ಇದಾದ ಬಳಿಕ ಮತ್ತೆ ಇಂದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27), ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜುನಾಥ ಮಡಿವಾಳಪ್ಪ ಕಾಜಗಾರ್ (28), ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರುನಾಥ ಭೀರಪ್ಪ ತಮ್ಮಣ್ಣವರ (38), ಅಥಣಿ ತಾಲೂಕಿನ ಹೂಲಿಕಟ್ಟಿ ಮಂಜುನಾಥ ಗೋಪಾಲ ತೇರದಾಳ (31) ಅವರೂ ಕೂಡ ಚಿಕಿತ್ಸೆ ಫಲಿಸದೆ ಮೃತ ದುರ್ದೈವಿಗಳು.
ಸದ್ಯ ತೀವ್ರ ನಿಗಾ ಘಟಕದಲ್ಲಿ ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದ ರಾಘವೇಂದ್ರ ಮಲ್ಲಪ್ಪ ಗಿರಿಯಾಳ್ (36) ಅವರಿಗೆ ಚಿಕಿತ್ಸೆ ಮುಂದುವರಿದಿದೆ.


