ನವದೆಹಲಿ: ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ) ಸೋಮವಾರ ಒಂದು ಲಕ್ಷ ಕೋಟಿ ರೂಪಾಯಿಗಳ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನಿಧಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.
ವಿಕ್ಷಿತ್ ಭಾರತ್ 2047 ಎಂಬ ಗುರಿಯೊಂದಿಗೆ ನಡೆದ ಮೊದಲ ಉದಯೋನ್ಮುಖ ವಿಜ್ಞಾನ ಮತ್ತು ತಂತ್ರಜ್ಞಾನ ನಾವೀನ್ಯತೆ ಸಮಾವೇಶ (ಇಎಸ್‌ಟಿಐಸಿ) 2025ಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಆ ಮೂಲಕ ನೀತಿ ನಿರೂಪಕರು, ನವೋದ್ಯಮಿಗಳು ಮತ್ತು ಜಾಗತಿಕ ಚಿಂತನಾ ನಾಯಕರನ್ನು ಒಂದೇ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಈ ಸಮಾವೇಶದಲ್ಲಿ ಭಾರತದ ವೈಜ್ಞಾನಿಕ ಸಾಧನೆಗಳನ್ನು ಪ್ರದರ್ಶಿಸುವ ಕಾಫಿ ಟೇಬಲ್ ಪುಸ್ತಕವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ವಿಷನ್ ದಾಖಲೆಯನ್ನು ಬಿಡುಗಡೆ ಮಾಡಿದರು.


