ಹೊಸದಾಗಿ ಉದ್ಯೋಗಕ್ಕೆ ಸೇರುವ 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್ ಅನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎನ್ನುವ ಮಾಹಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2024-25ನೇ ಕೇಂದ್ರ ಬಜೆಟ್ ಮಂಡನೆ ಮಾಡಿರುವ ಸೀತಾರಾಮನ್, ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ.
ಮೊದಲ ಬಾರಿಗೆ ಸಂಘಟಿತ ವಲಯದಲ್ಲಿ ಉದ್ಯೋಗವನ್ನು ಪ್ರಾರಂಭಿಸುವವರಿಗೆ ಒಂದು ಪಿಎಫ್ ಅನ್ನು ನೀಡಲಾಗುವುದು. ಈ ವೇತನವನ್ನು ಡಿಬಿಟಿ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯು ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಸಹಾಯವನ್ನು ಪಡೆಯಲಿದ್ದಾರೆ.
ಇಪಿಎಫ್‌ಒನಲ್ಲಿ ನೋಂದಾಯಿಸಿದ ಜನರಿಗೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಸರ್ಕಾರವು ಉದ್ಯೋಗಕ್ಕೆ ಸಂಬಂಧಿಸಿದ ಮೂರು ಯೋಜನೆಗಳನ್ನು ಪ್ರಾರಂಭಿಸುತ್ತದೆ ಎಂದು ಹಣಕಾಸು ಸಚಿವರು ಹೇಳಿದರು. ಒಂದು ತಿಂಗಳ ಪಿಎಫ್ (ಭವಿಷ್ಯ ನಿಧಿ) ಕೊಡುಗೆ ನೀಡುವುದರಿಂದ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ 30 ಲಕ್ಷ ಯುವಕರಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ಹೇಳಿದರು.