ಬೆಂಗಳೂರು, ಡಿಸೆಂಬರ್ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಿದ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾರುತ್ತಿತ್ತು. ಈ ಡೀಲ್ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್ ಟಾಪ್ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.