ಬೆಂಗಳೂರು, ಮಾರ್ಚ್ 24: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚಾಗಿರುವ ಬಗ್ಗೆ ವರದಿಯಾಗಿದೆ. 2025 ರ ಮೊದಲ ಎರಡು ತಿಂಗಳಲ್ಲಿ ಪ್ರತಿದಿನ ಸರಾಸರಿ 10 ಪೋಕ್ಸೊ ಪ್ರಕರಣಗಳು ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ಒದಗಿಸುವ ಕಾಯ್ದೆ) ದಾಖಲಾಗಿವೆ. 2024 ರಲ್ಲಿ, ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು 8,233 ದಾಖಲಾಗಿದ್ದವು ಎಂದು ಪೊಲೀಸ್ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. ಇದು 2023ರಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಹೋಲಿಸಿದರೆ ಹೆಚ್ಚಾಗಿತ್ತು. 2023 ರಲ್ಲಿ 7,854 ಪ್ರಕರಣಗಳು ದಾಖಲಾಗಿದ್ದವು. ಒಟ್ಟಾರೆಯಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಶೇ 38.89 ರಷ್ಟು ಏರಿಕೆಯಾಗಿದೆ.
202 ಪ್ರಕರಣಗಳನ್ನು ಸುಳ್ಳು ಪ್ರಕರಣಗಳೆಂದು ಹೇಳಲಾಗಿದೆ. 2025 ರಲ್ಲಿಯೂ ಮಕ್ಕಳ ಮೇಲಿನ ಅಪರಾಧ ಕೃತ್ಯಗಳ ಪ್ರವೃತ್ತಿ ಮುಂದುವರೆದಿದ್ದು, ಜನವರಿ ಮತ್ತು ಫೆಬ್ರವರಿಯಲ್ಲಿ ಕ್ರಮವಾಗಿ 348 ಮತ್ತು 264 ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ವರತಿ ತಿಳಿಸಿದೆ.