ಢಾಕಾ: ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾಕಾರರ ನಡುವೆ ಭಾನುವಾರ ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.
ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಆಡಳಿತ ಪಕ್ಷದ ಬೆಂಬಲಿಗರು, ಅಧಿಕಾರಿಗಳು ಮೊಬೈಲ್ ಇಂಟರ್ನೆಟ್ ಅನ್ನು ಕಡಿತಗೊಳಿಸುವಂತೆ ಒತ್ತಾಯಿಸಿದರು. ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.
ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಆಗ್ರಹಿಸಿದರು. ತಾರತಮ್ಯದ ವಿರುದ್ಧ ವಿದ್ಯಾರ್ಥಿಗಳಿಂದ ಭಾನುವಾರ ಬೆಳಗ್ಗೆ ನಡೆದ ಅಸಹಕಾರ ಕಾರ್ಯಕ್ರಮಕ್ಕೆ ಅವಾಮಿ ಲೀಗ್, ಛತ್ರ ಲೀಗ್ ಜುಬೋ ಲೀಗ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರು, ಆಡಳಿತ ಪಕ್ಷದ ಬೆಂಬಲಿಗರಿಂದ ತೀವ್ರ ಘರ್ಷಣೆ ಪ್ರಾರಂಭವಾದವು. ಅಸಹಕಾರ ಕಾರ್ಯಕ್ರಮದ ಹಿನ್ನೆಲೆ ದೇಶಾದ್ಯಂತ ಘರ್ಷಣೆಗಳು, ಗುಂಡಿನ ದಾಳಿಗಳು ಮತ್ತು ಅಹಿತಕರ ಘಟನೆಗಳ ನಡೆದಿವೆ. ಈ ವೇಳೆ ಕನಿಷ್ಠ 98 ಜನರು ಸಾವನ್ನಪ್ಪಿದ್ದಾರೆ ಎಂದು ಬಂಗಾಳಿ ಭಾಷೆಯ ಪ್ರಮುಖ ಪತ್ರಿಕೆ ಪ್ರೋಥೋಮ್ ಅಲೋ ವರದಿ ಮಾಡಿದೆ.