ಬೆಂಗಳೂರು, (ಅಕ್ಟೋಬರ್ 20): ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಯೋಗಿತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30)