ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತ

Ravi Talawar
ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತ
WhatsApp Group Join Now
Telegram Group Join Now

ಮಧ್ಯಪ್ರದೇಶ,03: ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್​ಗಢದಲ್ಲಿ ನಡೆದಿದೆ. 15 ಮಂದಿ ಗಾಯಗೊಂಡಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಹೋಗಿದ್ದವರು ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದರು.

ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇಲ್ಲ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

WhatsApp Group Join Now
Telegram Group Join Now
Share This Article