ಬಳ್ಳಾರಿ,ಏ.13 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.14 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಭಾಗವಹಿಸುವರು.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ.ಎನ್.ಚಿನ್ನಸ್ವಾಮಿ ಸೋಸಲೆ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಗಾಥೆ, ವಿಚಾರಧಾರೆ ಕುರಿತು ವಿಶೇಷ ಉಪನ್ಯಾಸ ನೀಡುವರು.
*ಮಾಲಾರ್ಪಣೆ:*
ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಮೊದಲ ರೈಲ್ವೇ ಗೇಟ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡುವರು.
*ಮೆರವಣಿಗೆ:*
ಬಳಿಕ ಬೆಳಿಗ್ಗೆ 09.30 ರಿಂದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಮರಳಿ ಮುನ್ಸಿಪಲ್ ಕಾಲೇಜು ಮೈದಾನದಿಂದ ವರೆಗೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ತಿಳಿಸಿದ್ದಾರೆ.
ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭ


