ಬೆಂಗಳೂರು, ಅಕ್ಟೋಬರ್ 19: ಕ್ಷೇತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ 45 ಶಾಸಕರ ಕ್ಷೇತ್ರಗಳಿಗೆ ಕ್ರಿಯಾ ಯೋಜನೆ ಅಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ ಮಾಡಿದೆ.
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಇದೇ ವರ್ಷ ಜನವರಿಯಲ್ಲಿ ರಾಜ್ಯ ಸರ್ಕಾರ 176 ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿತ್ತು. ಈ ವೇಳೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಬಾಕಿ ಉಳಿದಿತ್ತು. ಇದೀಗ ಶಾಸಕರ ಒತ್ತಡದ ಮೇರೆಗೆ ಅನುದಾನ ನೀಡಲಾಗಿದೆ.