2ಎ ಮೀಸಲಾತಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌; 20 ಮಂದಿಗೆ ಗಾಯ

Ravi Talawar
 2ಎ ಮೀಸಲಾತಿ ಹೋರಾಟ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌; 20 ಮಂದಿಗೆ ಗಾಯ
WhatsApp Group Join Now
Telegram Group Join Now

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬಾರದ್ದನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಮಧ್ಯಾಹ್ನದಿಂದ ಶಾಂತಿಯುತವಾಗಿ ಜನರನ್ನು ತಡೆದು ನಿಲ್ಲಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಬಳಿಕ ಸಂಘರ್ಷ ಯಾತ್ರೆ ಘೋಷಿಸಿದರು.

ಹಲವರಿಗೆ ಗಾಯ: ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂರು ಬಾರಿ ಲಾಠಿ ಬೀಸಿದರು. ಕೆಲವರಿಗೆ ತಲೆಗೆ ಗಾಯವಾಗಿ ರಕ್ತ ಹೊರಬಂತು. ಮತ್ತೆ ಕೆಲವರ ಮೈ-ಕಾಲುಗಳಿಗೆ ಗಾಯಗಳಾದವು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ವಾಮೀಜಿ, ಯತ್ನಾಳ್ ಸೇರಿ ಹಲವರು ಹೆದ್ದಾರಿಯಲ್ಲೇ ಧರಣಿ ಕುಳಿತರು.

ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಬ್ಯಾರಿಕೇಡ್ ಅಡ್ಡ ಇಟ್ಟು, ವಾಹನಗಳನ್ನು ನಿಲ್ಲಿಸಿ ಜನರನ್ನು ತಡೆದರು. ಹೆದ್ದಾರಿ ತುಂಬಾ ಜನ ಹರಿದಾಡಿದರು. ನಾಲ್ಕು ಕಡೆ ವಾಹನಗಳ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿದರು. ಇದರ ನಡುವೆ ಸ್ವಾಮೀಜಿಯನ್ನು ಭೇಟಿ ಮಾಡಲು ಹೋದ ಹಿರಿಯ ಅಧಿಕಾರಿಗಳು, ಕೆಲವೇ ಜನರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಆಗುವಂತೆ ಮನವಿ ಮಾಡಿದರು. ಇದಕ್ಕೊಪ್ಪದ ಸ್ವಾಮೀಜಿ, ನಾವು ಶಾಂತಿಯುತವಾಗಿ ಸುವರ್ಣಸೌಧದ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article