ಮದ್ದೂರಿನಲ್ಲಿ ಕಲ್ಲೆಸೆತ ಪ್ರಕರಣ: 21 ಮಂದಿ ಮುಸ್ಲಿಮರ ಬಂಧನ

Ravi Talawar
ಮದ್ದೂರಿನಲ್ಲಿ ಕಲ್ಲೆಸೆತ ಪ್ರಕರಣ: 21 ಮಂದಿ ಮುಸ್ಲಿಮರ ಬಂಧನ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 8: ಮಂಡ್ಯದ  ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ. ಮಸೀದಿ ಕಡೆಯಿಂದ 2 ಕಲ್ಲುಗಳನ್ನು ಎಸೆದ ಬಗ್ಗೆ ಮಾಹಿತಿ ಇದೆ. ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ. ಹಾಗಿದ್ದರೂ ಬಿಜೆಪಿ  ಹಾಗೂ ಜೆಡಿಎಸ್​​​ನವರು ಪ್ರತಿಭಟನೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ  ಆರೋಪಿಸಿದರು. ಮದ್ದೂರು ಘಟನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ. ಅದರಲ್ಲಿ ಹೊರಗಡೆಯ ಒಂದಿಬ್ಬರು ಮೂರು ಜನ ಇರಬಹುದು ಎನ್ನಲಾಗಿದೆ. ಹಿಂದೂಗಳ ಮೇಲೆ ಯಾವುದೇ ಕೇಸ್ ಹಾಕಿಲ್ಲ, ಯಾರನ್ನೂ ಬಂಧಿಸಿಲ್ಲ ಎಂದರು.

WhatsApp Group Join Now
Telegram Group Join Now
Share This Article