ಬೆಳಗಾವಿ: (ಡಿ.11) ರಾಜ್ಯದಲ್ಲಿ ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು. ಕಾರಣ ಮುಂದಿನ ವರ್ಷದ ಮಾರ್ಚ್ ತಿಂಗಳಿಂದ ಸುಮಾರು ಎರಡುವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಜನತೆಗೆ ಭರವಸೆ ನೀಡಿದ್ದಾರೆ.
ಸುವರ್ಣ ಸೌಧದಲ್ಲಿ ಗುರುವಾರ ನಡೆದ್ದ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರು, ರೈತರ ಅನುಕೂಲಕ್ಕಾಗಿ ಕೃಷಿ ಪಂಪ್ ಸೇಟ್ ಗಳಿಗೆ ದಿನದಲ್ಲಿ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಸರ್ಕಾರಕ್ಕೆ ಒತ್ತಾಯಿಸಿದೆ. ಆದರೆ, ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ಈಗ ನಮಲ್ಲಿ ಹೆಚ್ಚು ವಿದ್ಯುತ್ ಇದೆ. ಏಳು ಗಂಟೆ ಬದಲಾಗಿ ಕೃಷಿ ಪಂಪ್ ಸೆಟ್ ಗಳಿಗೆ 10 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಅವರು ಒತ್ತಾಯಿಸಿದರು.
ಕೃಷಿಗೆ 24 ಗಂಟೆ ವಿದ್ಯುತ್ ಪೂರೈಸಬಹುದು. ಏಕೆಂದರೆ ನಮ್ಮ ಪಂಪ್ ಸೆಟ್ ಗಳು ಹಾಳಾಗುತ್ತವೆ. ಅಂತರ್ಜಲ ಕೂಡ ಆ ಪ್ರಮಾಣದಲ್ಲಿ ನಮ್ಮಲ್ಲಿ ಇಲ್ಲ. ರಾತ್ರಿ ಹೊತ್ತು ಮಾತ್ರ ವಿದ್ಯುತ್ ಪೂರೈಸಿ ಎಂದು ರೈತರೇ ಒತ್ತಾಯಿಸುತ್ತಿದ್ದಾರೆ. ಕುಸುಮ್-ಸಿ ಯೋಜನೆಯಡಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ, ಅಲ್ಲಿಯ ಪೂರೈಸಲಾಗುತ್ತದೆ ಎಂದು ಸಚಿವರು ತಿಳಿಸಿದರು.


