ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೇ ಫಂಡ್​  ಶೇ25 ರಷ್ಟು ಹೆಚ್ಚಳ

Ravi Talawar
ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೇ ಫಂಡ್​  ಶೇ25 ರಷ್ಟು ಹೆಚ್ಚಳ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 23: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ  ಮುಷ್ಕರಕ್ಕೆ ಮಣಿದ ಸರ್ಕಾರ, ಸ್ಟೇ ಫಂಡ್​  ಅನ್ನು ಶೇ25 ರಷ್ಟು ಹೆಚ್ಚಳ ಮಾಡಿದೆ. ಶೇ 100ರಷ್ಟು ಸ್ಟೇ ಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ,  ಶೇ25 ರಷ್ಟು ಸ್ಟೇ ಫಂಡ್​​ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವರ ಭರವಸೆ ಬೆನ್ನಲ್ಲೇ ವಿದ್ಯಾರ್ಥಿಗಳು ಮುಷ್ಕರ ವಾಪಸ್ ಪಡೆದಿದ್ದಾರೆ.

ಮಂಕಿಪಾಕ್ಸ್ ಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಕೂಡ ಬಿಡುಗಡೆಯಾಗಿದೆ. ನಮ್ಮ ಇಲಾಖೆಯಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಸೌಲಭ್ಯವಿದೆ. ಐಸೋಲೆಷನ್ ಬೆಡ್ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ. ಉಚಿತವಾಗಿ ಟೆಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಒಂದೂ ಕೇಸ್ ಇಲ್ಲದ ಕಾರಣ ಕೇವಲ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಕೇಸ್ ಕಂಡುಬಂದಲ್ಲಿ ಬೇರೆ ಆಸ್ಪತ್ರೆಯಲ್ಲಿ ಕೂಡ ವ್ಯವಸ್ಥೆ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.
WhatsApp Group Join Now
Telegram Group Join Now
Share This Article