ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ : ೬೨ಅಕ್ಕಿ ಚೀಲ ವಶ

Pratibha Boi
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ : ೬೨ಅಕ್ಕಿ ಚೀಲ ವಶ
filter: 0; fileterIntensity: 0.0; filterMask: 0; captureOrientation: 90; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2097152;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?Cloudy, icon:1, weatherInfo:102;temperature: 34;
WhatsApp Group Join Now
Telegram Group Join Now

ಸಿಂದಗಿ: ನಗರದ ಎಪಿಎಎಂಸಿ ಯಾರ್ಡ್‌ನ ಆವರಣದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಬುಲೆರೊ ಪಿಕ್‌ಅಪ್ ವಾಹನದಲ್ಲಿದ್ದ ೫೦ಕೆಜಿ ತೂಕದ ೬೨ಅಕ್ಕಿ ಚೀಲಗಳನ್ನು ಮಂಗಳವಾರ ಸಾಯಂಕಾಲ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ತಾಲೂಕು ಆಹಾರ ನಿರೀಕ್ಷಕಿ ಪೊಲೀಸರ ಸಹಕಾರದೊಂದಿಗೆ ದಾಳಿ ಮಾಡಿದ್ದಾರೆ. ಪೊಲೀಸರನ್ನು ನೋಡಿದ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ೩೧ಕಿಂಟಾಲ್ ೪೦ಕೆಜಿ ತೂಕದ ೯೧,೦೬೦ ರೂ.ಬೆಲೆ ಬಾಳುವ ಅಕ್ಕಿ ಹಾಗೂ ವಾಹನದ ಸಮೇತ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕಿ ವಿದ್ಯಾ ಹಿಪ್ಪರಗಿ ಪ್ರಕರಣ ದಾಖಲಿಸಿದ್ದಾರೆ.

 

WhatsApp Group Join Now
Telegram Group Join Now
Share This Article