ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ (Money seized) ಮಾಡಿದ್ದಾರೆ.