ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಅವರನ್ನು 16-10 ಅಂತರದಿಂದ ಸೋಲಿಸಿ ಮನುಭಾಕರ್ – ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.
ಮತ್ತೊಂದೆಡೆ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ 579 ಅಂಕಗಳಿಸಿ ನಾಲ್ಕನೇ ಸ್ಥಾನ ಪಡೆದಿದ್ದರು. ಇಲ್ಲಿ 3ನೇ ಮತ್ತು 4ನೇ ಸ್ಥಾನಗಳನ್ನು ಪಡೆದ ಸ್ಪರ್ಧಿಗಳ ನಡುವೆ ಕೇವಲ 1 ಅಂಕಗಳ ವ್ಯತ್ಯಾಸವಿದ್ದಿದ್ದರಿಂದ ಕಂಚಿನ ಪದಕದ ಸ್ಪರ್ಧೆಯಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಲಾಗಿತ್ತು.