ರಾಮದುರ್ಗ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಸಂಘದಿಂದ ಶಿಕ್ಷಕರ ದಿನಾಚರಣೆ ನಿಮಿತ್ಯ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಟ್ಟಣದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ(ಅನುದಾನಿತ) ಶಾಲೆಯ ದೈಹಿಕ ಶಿಕ್ಷಕ ಶಿವಾನಂದ ಭೀಮಪ್ಪ ಕೊಳಚಿ ಆಯ್ಕೆಯಾಗಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರ ಪಟ್ಟಣದ ಮೃತ್ಯುಂಜಯ ಸಭಾಭವನದಲ್ಲಿ ಸೆ.೧೪ ರಂದು ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.