“ಕ್ರೀಡೆಯಲ್ಲಿ ಮಕ್ಕಳಿಗೆ ಸ್ಫೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ”

Pratibha Boi
“ಕ್ರೀಡೆಯಲ್ಲಿ ಮಕ್ಕಳಿಗೆ ಸ್ಫೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ”
WhatsApp Group Join Now
Telegram Group Join Now

ಹುನಗುಂದ; ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಎಂದಿಗೂ ವಿಶೇಷ ಗೌರವವಿದೆ. ಅವರು ಸದಾ ಸ್ಫೂರ್ತಿದಾಯಕರಾಗಿರುತ್ತಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಅವರು ತಾಲೂಕಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ೨೦೨೫- ೨೬ ನೇ ಸಾಲಿನ ಹುನಗುಂದ ಮತ್ತು ಇಲಕಲ್ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ. ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ಮಿತಿ ಇಲ್ಲ. ಎಲ್ಲ ವಯೋಮಾನದವರೂ ಭಾಗವಹಿಸಬಹುದು. ಮಕ್ಕಳಿಗೆ ಸ್ಫೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ನಮ್ಮ ಜೀವನದಲ್ಲೂ ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಮುನ್ನಡೆಯಬೇಕು. ಉತ್ತಮ ಜೀವನ ನಿರ್ವಹಣೆಯ ಕಲೆಗಾರಿಕೆಯನ್ನು ಕ್ರೀಡಾಕೂಟಗಳಿಂದಲೂ ಮೈಗೂಡಿಸಿ ಕೊಳ್ಳಲು ಸಾಧ್ಯ ಕ್ರೀಡೆಯಲ್ಲಿ ನಾವು ಸಕ್ರೀಯವಾಗಿ ತೊಡಗಿಸಿಕೊಂಡರೆ ದೈಹಿಕ ಸಾಮರ್ಥ್ಯ ಮಾತ್ರವಲ್ಲ ನಮಗೆ ಜೀವನೋತ್ಸಾಹವನ್ನೂ ನೀಡುತ್ತದೆ ಎಂದರು. ಕ್ಷೇತ್ರ ಶಿಕ್ಷಣಾದಿಕಾರಿ ಜಾಸ್ಮೀನ ಕಿಲ್ಲೇದಾರ ಪ್ರಾಸ್ತಾವಿಕವಾಗಿ ಮಾತನಾಡಿದ, ಯುವಜನ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ. ಕಾರ್ಯಕ್ರಮದಲ್ಲಿ ನಗರಸಭೆ ಅದ್ಯಕ್ಷೆ ಸುಧಾರಾಣಿ ಸಂಗಮ, ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಮಹಾಂತೇಶ ಹನಮನಾಳ, ಮುಖಂಡರಾದ ಮಹಾಂತೇಶ ಅವಾರಿ, ವಿಜಯಮಹಾಂತೇಶ ಗದ್ದನಕೇರಿ, ಸದಾಶಿವ ಗುಡಗುಂಟಿ, ನಾಗರಾಜ ಹೊಸೂರ, ವಿನೋದ ಭೋವಿ, ಶಂಕರ ಪೈಲ, ಸಂಗಮೇಶ ಪಾಟೀಲ, ಎಂ.ಟಿ. ನಡುವಿನಮನಿ, ನಧಾಪ, ಎಂಎಸ್.ಪಾಟೀಲ, ಸೇರಿದಂತೆ ಅನೇಕರು ಇದ್ದರು,

WhatsApp Group Join Now
Telegram Group Join Now
Share This Article