ನಾಳೆಯಿಂದ ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರೆ

Pratibha Boi
ನಾಳೆಯಿಂದ ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರೆ
WhatsApp Group Join Now
Telegram Group Join Now

ಹುನಗುಂದ; ಸಮೀಪದ ತಿಮಮಾಪೂರ ಗ್ರಾಮದಲ್ಲಿ ಸಪ್ಟಂಬರ್ ೨೧ ಹಾಗೂ ೨೨ ರಂದು ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರೆಯು ಸೋಮವಾರ ಜರುಗಲಿದ್ದು ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರು ಕೃಪೆಗೆ ಪಾತ್ರರಾಗಬೇಕೆಂದು ತಿಮ್ಮಾಪೂರ ಗ್ರಾಮಸ್ಥರು ವಿನಂತಿಸಿದ್ದಾರೆ.
ಜಾತ್ರೆಯ ಅಂಗವಾಗಿ ದಿನಾಂಕ ೨೦ ರಂದು ಶನಿವಾರ ರಾತಿ ೮ಕ್ಕೆ ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ನೂರಾರು ಭಕ್ತರು ಬರಿಗಾಲಿನಿಂದ ತಿಮ್ಮಾಪೂರ ಪತ್ರಿಗಿಡದ ಬಸವೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಕಿರಸೂರ ಗ್ರಾಮಕ್ಕೆ ತೆರಳುತ್ತಾರೆ. ಅಲಿನ ಗ್ರಾಮಸ್ಥರು ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ಭಕ್ತರನ್ನು ಬರಮಾಡಿಕೊಂಡು ಊರಿನ ಹನಮಂತ ದೇವರಿಗೆ ಪೂಜೆ ಸಲ್ಲಿಸುವರು. ಅಲ್ಲಿಂz ಗ್ರಾಮಸ್ಥರು ಡೊಳ್ಳಿನ ಸಂಗಡ ೫ ಕುಂಬಳ ಎಲೆ ತೆಗೆದುಕೊಂಡು ರಾತ್ರಿ ೧೨-೦೦ ಘಂಟೆಯ ಸುಮಾರಿಗೆ ಹಡಗಲಿ ಸಮೀಪದ ಮಲಪ್ರಭಾ ನದಿಗೆ ತೆರಳುತ್ತಾರೆ.
ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಿದ ನಂತರ ಹೊಳೆಯಲ್ಲಿ ಪೂಜೆ, ಪುನಸ್ಕಾರಗಳು ನಡೆಂದು ಹಡಗಲಿ ಗ್ರಾಮಕ್ಕೆ ತೆರಳಿ ಅಲ್ಲಿಯ ಹನಮಂತ ದೇವರಿಗೆ ಪೂಜೆ ಸಲ್ಲಿಸಿದ ನಂತರ ಬೆಳಿಗ್ಗೆ ೪-೦೦ ರ ಸುಮಾರಿ ಹನುಮಂತ ದೇವರ ಕಟ್ಟೆಯ ಮೇಲೆ ಮಾರುತೇಶ್ವರ ಪೂಜಾರಿಯು ಭವಿ?ದ ನುಡಿ ಮಳೆ, ಬೆಳೆ, ಹೇಳಿಕೆ ನಡೆಯುವದು. ನಂತರ ಪಲ್ಲಕ್ಕಿ ಹಾಗೂ ಭಕ್ತರಿಗೆ ಕುರಹಟ್ಟಿ ಸಹೋದರರು ಅಲ್ಪೋಪಹಾರದ ಸೇವೆ ಸಲ್ಲಿಸುತ್ತಾರೆ. ನಂತರ ಮರಳಿ ಪಲ್ಲಕ್ಕಿಯೊಂದಿಗೆ ಗ್ರಾಮಕ್ಕೆ ಬಂದು ತಲುಪುತ್ತಾರೆ.ಸೆ. ೨೧ರಂದು ರವಿವಾರ ಮುಂಜಾನೆ ೮=೦೦ ಕ್ಕೆ ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ದೇವರಿಗೆ ರುದ್ರಾಭಿ?ಕ ನಡೆದು ಸಕಲ ವಾದ್ಯ-ಮೇಳದೊಂದಿಗೆ ಕಳಸದ ಮೆರವಣಿಗೆ. ಗೋಪುರಕ್ಕೆ ಕಳಸಾರೋಹಣ, ಮುಂಜಾನೆ ೧೧=೦೦ ಕ್ಕೆ ಶ್ರೀ ಮಾರುತಿದೇವರ ಪಲ್ಲಕ್ಕಿಯನ್ನು ಶ್ರೀ ವಿರುಪಾಕ್ಷಗೌಡ ದಾದ್ಮಿಯವರ ಹೊಲದಿಂದ ದೇವಸ್ಥಾನಕ್ಕೆ ಕರೆತರಲಾಗುವುದು. ನಂತರ ಹೊಳೆಯಿಂದ ತಂದ ನೀರನ್ನು ದೇವರಿಗೆ ಜಲಾಭೀಶೇಕ ನಡೆಯುತ್ತದೆ. ಮಧ್ಯಾಹ್ನ ೧೨=೦೦ ಘಂಟೆಗೆ ಪೂಜಾರಿಗಳಿಂದ ವಿಶಿ?ವಾದ ಹತಾರ ಸೇವೆ ನಡೆಯಲಿದೆ
ಸಾಯಂಕಾಲ ೪=೦೦ ಪೂಜಾರಿ ಮನೆಯಿಂದ ಮಾವಿನ ಮರತಪ್ಪ ಎಂಬ ಹನಮಂತ ದೇವರ ಮೂರ್ತಿಯನ್ನು ದೇಸ್ಥಾನಕ್ಕೆ ತರಲಾಗುತ್ತದೆ. ೫ ಕ್ಕೆ ವಿಶಿ? ರೀತಿಯ ಹತಾರ ಸೇವೆಯೊಂದಿಗೆ ನಡೆದು ಇದೇ ಸಂದರ್ಭದಲ್ಲಿ ಸುತಕಾಯಿ (ತೆಂಗಿನಕಾಯಿ)ಒಡೆಯುವ ಕಾರ್ಯ ನಡೆಯುವುದು. ನಂತರ ಹನಮಂತ ದೇವರ ಪೂಜಾರಿಯು ಭರಮದೇವರ ಕಟ್ಟೆಯ ಮೇಲೆ ನಿಂತು ಹತಾರ ಸೇವೆ ಆದ ನಂತರ ಭವಿ?ದ ಮಳೆ, ಬೆಳೆಗಳ ಬಗ್ಗೆ ಹೇಳಿಕೆ ನಡೆಯುವದು. ಸೆ. ೨೨ ರಂದು ಬಸವೇಶ್ವರನಿಗೆ ರುದ್ರಾಭಿ?ಕ, ನಂತರ ಇಂದಿಗೆ ರಥೋತ್ಸವ ಪ್ರಾರಂಭಗೊಂಡು ೨೫ನೇ ವ?ದ ರಜತ ಮಹೋತ್ಸವ ಕಾರ್ಯಕ್ರಮದ ನಿಮಿತ್ಯ ನಮ್ಮೂರಿನ ಶಾಲೆಯ ಶಿಕ್ಷಕರ ಬಳಗಕ್ಕೆ ಗುರುವಂದನ ಕಾರ್ಯಕ್ರಮ ಹಾಗೂ ಹಾಲಿ ಹಾಗೂ ಮಾಜಿ ಸೈನಿಕರಿಗೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮದ ಜೊತೆಗೆ ವಿವಿಧ ಶ್ರೀಗಳ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ ನಂತರ ಲಘು ರಥೋತ್ಸವ ನಂತರ, ಮಹಾ ರಥೋತ್ಸವ ಜರುಗಲಿದೆ
ರಾತ್ರಿ ೧೦ ಗಂಟೆಗೆ ನಾಟಕ ಪ್ರದರ್ಶನ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಚಿಕ್ಕಲಗುಂಡಿ ಗ್ರಾಮದ ಅಂಜನಿಪುತ್ರ ನಾಟ್ಯ ಸಂಘ, (ವಿಟ್ಟಲ್ ಚಿಕ್ಕಲಗುಂಡಿ )ಅವರಿಂದ ರಾಮದುರ್ಗ ತಾಲೂಕಿನ ಚನ್ನಾಪುರ ಗ್ರಾಮದ ಕನಸುಗಾರ ಕವಿ ರಮೇಶ್ ಹೆಚ್ ಬಡಿಗೇರ ವೀರಚಿತ ಹಾಸ್ಯ ಭರಿತ ಸಾಮಾಜಿಕ ನಾಟಕ ತಾಯಿಯ ಋಣ ಮಣ್ಣಿನ ಗುಣ ಎಂಬ ಸಾಮಾಜಿಕ ಪ್ರದರ್ಶನ ಜರುಗಲಿದೆ ಎಂದು ಜಾತ್ರಾ ಸಮಿತಿ ತಿಳಿಸಿದ್ದಾರ
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಸಕಲ-ಸದ್ಭಕ್ತರು ಪಾಲ್ಗೊಂಡು ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರ ಪರವಾಗಿ ಸ್ಥಳೀಯ ಸ್ವಾಮಿ ವಿವೇಕಾನಂದ ಯುವಕ ಮಂಡಳದ ಸದಸ್ಯ ಹಾಗೂ ಪತ್ರಕರ್ತ ಜಗದೀಶ ಹದ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.”

WhatsApp Group Join Now
Telegram Group Join Now
Share This Article