ಬೆಂಗಳೂರು (ನ.08): ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಆದ್ರೆ ಇತ್ತ ಸಕ್ಕರೆ ಕಾರ್ಖಾನೆ ಮಾಲೀಕರು ಅಪಸ್ವರ ಎತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಮಾಲೀಕರು ಹೇಳ್ತಿದ್ದಾರೆ. ಈ ಬಗ್ಗೆ, ಶಾಸಕರ ಭವನದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಕಾರ್ಖಾನೆಯವರು ಪ್ರತಿ ಟನ್ಗೆ 50 ರೂ ಕೊಡಲೇಬೇಕು ಎಂದಿದ್ದಾರೆ. ಮತ್ತೊಂದೆಡೆ ಸರ್ಕಾರದ ನಿರ್ಣಯದ ವಿರುದ್ಧ ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.
ಬೆಂಗಳೂರಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವ್ರು, ಪ್ರತಿ ಟನ್ಗೆ ಸಕ್ಕರೆ ಕಾರ್ಖಾನೆ ಮಾಲೀಕರು 50 ರೂಪಾಯಿ ಕೊಡ್ಬೇಕು. ಸರ್ಕಾರವೂ ಕೂಡ 50 ರೂಪಾಯಿ ಕೊಡುತ್ತೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಸಕ್ಕರಿ ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದ್ರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.


