ರಾಮದುರ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಜರುಗಿದ ಸಮಾರಂಭದಲ್ಲಿ ತಾಲೂಕಿನ ಸುನ್ನಾಳ ಗ್ರಾಮ ಪಂಚಾಯಿತಿಗೆ ಇಂದಿರಾ ಪ್ರಿಯದರ್ಶಿ ಪರಿಸರ ಮಿತ್ರ ಪ್ರಶಸ್ತಿ ಲಭಿಸಿದೆ.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಲರಾಮ ಲಮಾಣಿ, ಸದಸ್ಯರಾದ ಹನಮಂತ ಕುಲಗೋಡ, ಲಿಂಬನಗೌಡ ಪಾಟೀಲ, ರತ್ನವ್ವ ಮಾಳಿ, ಯಲ್ಲವ್ವ ಮಾದರ, ಸೇರಿದಂತೆ ಇತರರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹಬ್ಬಾಳಕರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎಂ.ಪಿ. ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇತರರಿದ್ದರು.


