Pratibha Boi
WhatsApp Group Join Now
Telegram Group Join Now

ಎಂ. ಕೆ. ಹುಬ್ಬಳ್ಳಿ: ಚ. ಕಿತ್ತೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಪಟ್ಟಣದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಪೂಜಾ ಸಮಿತಿ, ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರ ಇವರ ಸಂಯುಕ್ತ ಆಶ್ರಯದಲ್ಲಿ  ಡಾ. ಡಿ. ವೀರೇಂದ್ರ ಹೆಗ್ಗಡ  ಹಾಗೂ ಹೇಮಾವತಿ ವಿ. ಹೆಗ್ಗಡೆ ಅಮ್ಮನವರ ಕೃಪಾಶೀರ್ವಾದಗಳೊಂದಿಗೆ ನ 28 ರಂದು ಮುಂಜಾನೆ 11 ಕ್ಕೆ ಶ್ರೀ ಕಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ
ವಲಯ ಮಟ್ಟದ ಸಾಮೂಹಿಕ ಶ್ರೀ ಸಹಸ್ರ ಬಿಲ್ವಾರ್ಚನೆ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.
ಚ.ಕಿತ್ತೂರ ಶ್ರೀ ಮ.ನಿ.ಪ್ರ.ಸ್ವ ರಾಜಗುರು ಸಂಸ್ಥಾನ ಕಲ್ಮಠ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಜಿ ಸಾನಿಧ್ಯ ವಹಿಸಲಿದ್ದಾರೆ.ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ   ಚನ್ನರಾಜ ಬ. ಹಟ್ಟಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪಟ್ಟಣ ಪಂಚಾಯತ ಅಧ್ಯಕ್ಷ ಪ್ರಕಾಶ ರು. ಕೊಡ್ಲಿ  ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡ ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕರು ದಯಾಶೀಲ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ ಜ್ಯೋತಿ ಅಕ್ಕನವರು ಬೆಳಗಾವಿ ಜಿಲ್ಲಾ ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನಿರ್ದೇಶಕ ಸತೀಶ ನಾಯ್ಕ, ಸಹಸ್ರ ಬಿಲ್ವಾರ್ಚನೆ ಪೂಜಾ ಸಮಿತಿಯ ಗೌರವಾಧ್ಯಕ್ಷ  ಶ್ರೀಶೈಲ ಗಣಾಚಾರಿ,ನಿಕಟ ಪೂರ್ವ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಗದೀಶ ಹಾರುಗೊಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅದೃಶ್ಯಾನಂದ ಗದ್ದಿಹಳ್ಳಿಶೆಟ್ಟಿ, ಸಹಸ್ರ ಬಿಲ್ವಾರ್ಚನೆ ಸಮಿತಿ ಅಧ್ಯಕ್ಷ ರಾಜಕುಮಾರ ಗಾಣಿಗೇರ,ಯೋಜನಾಧಿಕಾರಿ ಬಿ.ಆರ್ ಯೋಗೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article