ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಭವ್ಯ ಮೆರವಣಿಗೆ ರೇ.ಚ.ರೇವಡಿಗಾರ (ವಿಜಯಪುರ ರಸ್ತೆ) ಯ ಮಾರ್ಗವಾಗಿ ಸಾಗಿ, ಸಂಗೋಳ್ಳಿ ರಾಯಣ್ಣ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ.ಬಿ.ಆರ್.ವೃತ್ತದವರೆಗೆ ಸಾಗಿ ಬಸವ ಮಂಟಪ ತಲುಪಿತು.
ಬಳಿಕ ಸಿಂದಗಿ ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ್ ಕೇರಪ್ಪ ಬೆಳ್ಳಿ ಉದ್ಘಾಟಿಸಿದರು.
ಸಿಂದಗಿ ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ಸಂವಿಧಾನವು ರಾಷ್ಟ್ರಕ್ಕೆ ಅರ್ಪಣೆಗೊಂಡಿರುತ್ತದೆ. ಯುವ ಸಮುದಾಯ ಭಾರತದ ಸಂವಿಧಾನ ಪೀಠಿಕೆಯನ್ನು ಓದಬೇಕು. ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು ಎಂದರು.
ಈ ವೇಳೆ ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕ ಎನ್.ಬಿ.ಪೂಜಾರಿ ಉಪನ್ಯಾಸ ನೀಡಿದರು. ಈ ವೇಳೆ ಪುರಸಭೆ ನಾಮ ನಿರ್ದೇಶಿತ ಸದಸ್ಯ ಸಾಯಬಣ್ಣ ಪುರದಾಳ, ದಸಂಸ ಮುಖಂಡ ರಾಕೇಶ ಕಾಂಬಳೆ, ಅಶೋಕ ಅಲ್ಲಾಪುರ ಮಾತನಾಡಿದರು.
ಈ ವೇಳೆ ತಹಶೀಲ್ದಾರ ಕೆ.ಎಸ್.ಬೆಳ್ಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ತಾಪಂ ಇಒ ರಾಮು ಅಗ್ನಿ, ಪಿಎಸ್ಐ ಆರೀಫ್ ಮುಷಾಪುರಿ, ರಾಜಶೇಖರ ಕೂಚಬಾಳ, ಮಲ್ಲಣ್ಣ ಸಾಲಿ, ಅಶೋಕ ಅಲ್ಲಾಪುರ, ಸಿದ್ದಪ್ಪ ಕಾರಿಮುಂಗಿ, ಪೀರೂ ಕೆರೂರ, ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಇದ್ದರು.


