ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂದ ಲೋಕಾ ತನಿಖೆ!

Ravi Talawar
ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂದ ಲೋಕಾ ತನಿಖೆ!
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್ 16: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ.

ಕೋವಿಡ್​ ಹಗರಣದ ತನಿಖೆಗೆ ಎಸ್​ಐಟಿ ರಚನೆ ಮಾಡಲು ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿತ್ತು. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.

 

WhatsApp Group Join Now
Telegram Group Join Now
Share This Article