ಗೋಲ್ಮಾಲ್ ಸಿಎಂ ಮುಡಾದಲ್ಲಿ 4000 ಕೋಟಿ ಗುಳುಂ: ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ವಾಗ್ದಾಳಿ

Ravi Talawar
ಗೋಲ್ಮಾಲ್ ಸಿಎಂ ಮುಡಾದಲ್ಲಿ 4000 ಕೋಟಿ ಗುಳುಂ: ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ವಾಗ್ದಾಳಿ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 2: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವ್ಯಂಗ್ಯವಾಡಿರುವ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ ಎಂದು ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article