ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ: ಸಾವನ್ನಪ್ಪಿದ 41 ಮಂದಿ

Ravi Talawar
ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ: ಸಾವನ್ನಪ್ಪಿದ 41 ಮಂದಿ
WhatsApp Group Join Now
Telegram Group Join Now

ವಯನಾಡ್(ಕೇರಳ): ನೆರೆ ರಾಜ್ಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಎರಡರಿಂದ ಮೂರು ಭೀಕರ ಭೂಕುಸಿತ ಉಂಟಾಗಿದೆ. ಇದುವರೆಗೆ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿ 41 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವು ಮಂದಿ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.

ಸರಣಿ ಭೂಕುಸಿತ: ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ 1 ಗಂಟೆಯ ಸುಮಾರಿಗೆ ಮೊದಲ ಭೂಕುಸಿತ ಸಂಭವಿಸಿದೆ. ನಂತರ ಬೆಳಗಿನ ಜಾವ 4.10ರ ಸುಮಾರಿಗೆ ಕಲ್ಪೆಟ್ಟಾದಲ್ಲಿ ಭೂಕುಸಿತ ಸಂಭವಿಸಿತು. ಪರಿಣಾಮ, ಹಲವು ಕುಟುಂಬಗಳು ಕಣ್ಮರೆಯಾಗಿವೆ. ಅಲ್ಲದೇ, ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳನಲ್ಲೂ ಭೂಕುಸಿತವಾಗಿದೆ. ಇಲ್ಲಿನ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಧಾರಾಕಾರ ಮಳೆ ಸುರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ), ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ದೌಡಾಯಿಸಿವೆ. ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡಗಳನ್ನೂ ರವಾನಿಸಲಾಗಿದೆ. ಕಣ್ಣೂರಿನಿಂದ ರಕ್ಷಣಾ ಭದ್ರತಾ ದಳದ ಎರಡು ತಂಡಗಳನ್ನು ವಯನಾಡ್‌ಗೆ ತೆರಳುವಂತೆ ಸೂಚನೆ ನೀಡಲಾಗಿದೆ ಎಂದು ಕೆಎಸ್‌ಡಿಎಂಎ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ರಾಜ್ಯ ಅರಣ್ಯ ಸಚಿವ ಎ.ಕೆ.ಸಶೀಂದ್ರನ್ ಸಹ ಧಾವಿಸಿದ್ದಾರೆ.

 

WhatsApp Group Join Now
Telegram Group Join Now
Share This Article