ವಸುಂಧರೆಗೆ ಗೌರವ ಸಾಹಿತ್ಯ ನಿಷ್ಟಿ ರುದ್ರಪ್ಪಗೆ ಸಾಹಿತ್ಯ ಶ್ರೀ ಪ್ರಶಸ್ತಿ
ಬಳ್ಳಾರಿ: ಮಾ,26- ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ 2025 ನೇ ಸಾಲಿನ ಪ್ರಶಸ್ತಿಗಳಿಗೆ ಜಿಲ್ಲೆಯ ಇಬ್ಬರು ಸಾಹಿತಿಗಳು ಭಾಜನರಾಗಿದ್ದಾರೆ. ಜೀವಮಾನ ಸಾಧನೆಗಾಗಿ ಗೌರವ ಪ್ರಶಸ್ತಿಗೆ ಡಾ. ವಸುಂದರಾ ಭೂಪತಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿ ರುದ್ರಪ್ಪ ಸಾಹಿತ್ಯ ಕ್ಷೇತ್ರದ ಅಮೂಲ್ಯ ಸೇವೆಗಾಗಿ ನೀಡುವ ಸಾಹಿತ್ಯ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ 50 ರಿಂದ 60ರ ವಯೋಮಾನದ 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ವರ್ಷದ “ಸಾಹಿತ್ಯಶ್ರೀ” ಪ್ರಶಸ್ತಿಯನ್ನು ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನಿಸಿ ಘೋಷಣೆ ಮಾಡಲಾಗಿದೆ.
ಹತ್ತು ಜನರಲ್ಲಿ ನಮ್ಮ ಜಿಲ್ಲೆಯ ನಿಷ್ಟಿ ರುದ್ರಪ್ಪ ಒಬ್ಬರು. ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ ಫಲಕವನ್ನು ಹೊಂದಿದೆ.

