ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

Ravi Talawar
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
WhatsApp Group Join Now
Telegram Group Join Now

ರಾಯಚೂರು, ಜುಲೈ 24: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ ಫುಡ್​ ಪಾಯ್ಸನ್ ಆಗಿದೆ ಎನ್ನಲಾಗಿದೆ.

ಬೆಳಿಗ್ಗೆ ಪುಲಾವ್ ತಿಂದಿದ್ದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ತಿಂಡಿ ತಿಂದಾದ ನಂತರ ಅವರಲ್ಲಿ ವಾಂತಿ, ಬೇಧಿ, ತಲೆ ನೋವು, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಕೆಲವು ಮಕ್ಕಳಲ್ಲಿ ತಲೆ ತಿರುಗುವಿಕೆ ಕಾಣಿಸಿತ್ತು. ವಸತಿ ಶಾಲೆಯಲ್ಲಿ ಪುಲಾವ್ ತಯಾರಿಸುವ ವೇಳೆ ಅದಕ್ಕೆ ಹಲ್ಲಿ ಬಿದ್ದಿತ್ತು ಎನ್ನಲಾಗುತ್ತಿದೆ.

ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲು ಸರ್ಕಾರ ಮುಂದಾಯಿತೇ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ. ಬೆಂಗಳೂರು ಕೃಷಿ ವಿವಿಯಿಂದ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಯಚೂರು ಕೃಷಿ ವಿವಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಚೂರು ನಗರದ ಲಿಂಗಸುಗೂರು ರಸ್ತೆಯಲ್ಲಿರುವ ಕೃಷಿ ವಿಶ್ವ ವಿದ್ಯಾಲಯ ಎದುರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ವರೆಗೆ ರಾಜ್ಯದಲ್ಲಿ ಖಾಸಗಿ ಕೃಷಿ ವಿಭಾಗದ ಕಾಲೇಜುಗಳಿಲ್ಲ. ಆದರೆ, ಈಗ ಮೊಲದ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ಬೆಂಗಳೂರು ಕೃಷಿ ವಿವಿ ಒಪ್ಪಿಗೆ ನೀಡಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಖಾಸಗಿ ಕೃಷಿ ಕಾಲೇಜುಗಳ ಸ್ಥಾಪನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.

 

 

WhatsApp Group Join Now
Telegram Group Join Now
Share This Article