45 ಚಿತ್ರದ ಪ್ರಮೋಷನ್ ಸಾಂಗ್ ರಲೀಸ್ ಮೂವರು ತಾರೆಯರ ಭರ್ಜರಿ ಸ್ಟೆಪ್ಸ್ 

Ravi Talawar
45 ಚಿತ್ರದ ಪ್ರಮೋಷನ್ ಸಾಂಗ್ ರಲೀಸ್ ಮೂವರು ತಾರೆಯರ ಭರ್ಜರಿ ಸ್ಟೆಪ್ಸ್ 
WhatsApp Group Join Now
Telegram Group Join Now
     ಬಹುನಿರೀಕ್ಷಿತ ಚಿತ್ರ ’45’  ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ “45” ಚಿತ್ರದ
‘AFRO ಟಪಾಂಗ’ ಅದ್ದೂರಿ ಪ್ರಮೋಷನ್ ಸಾಂಗ ಬಿಡುಗಡೆಯಾಗಿದೆ.
     ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಪ್ರಮೋಷನ್  ಹಾಡಿನಲ್ಲಿ ಉಗಾಂಡ ದೇಶದ ಹೆಸರಾಂತ ಜಿಟೊ ಕಿಡ್ಸ್ ಜೊತೆಗೆ ಚಿತ್ರದ ನಾಯಕರಾದ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
     “ನಾನು ನಿರ್ದೇಶಕನಾಗಲು ಶಿವರಾಜಕುಮಾರ್ ಅವರೇ ಕಾರಣ” ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ “ನಮ್ಮ ’45’ ಚಿತ್ರದಲ್ಲಿ ಹಾಡಿಲ್ಲ.  ಆದರೆ, ಪ್ರಮೋಷನಲ್ ಸಾಂಗ್ ಮಾಡಬೇಕೆಂಬ ಆಸೆ ಇತ್ತು. ಮಾಮೂಲಿ ತರಹ ಮಾಡುವುದು ಬೇಡ ಅಂದುಕೊಂಡೆವು. ಆಗ ನನಗೆ ಉಗಾಂಡದ ಜಿಟೊ ಕಿಡ್ಸ್ ಈ ಪ್ರಮೋಷನ್ ಸಾಂಗ್ ನಲ್ಲಿ ಅಭಿನಯಿಸಿದರೆ ಚೆಂದ ಎನಿಸಿತು. ಕಷ್ಟಪಟ್ಟು ಅವರನ್ನು ಸಂಪರ್ಕ ಮಾಡಿದ್ದೆವು. ಇವರ ಜೊತೆಗೆ ನಮ್ಮ ಚಿತ್ರದ ಮೂರು ಜನ ನಾಯಕರು ಅಭಿನಯಿಸಿದ್ದಾರೆ. ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ” ಎಂದರು.
     “45′ ಚಿತ್ರ ಬರೀ ಕರ್ನಾಟಕ ಮಾತ್ರ ಅಲ್ಲ. ಭಾರತದಾದ್ಯಂತ ಯಶಸ್ವಿಯಾಗಲಿ. ಏಕೆಂದರೆ ಅಂತಹ ಕಂಟೆಂಟ್ ವುಳ್ಳ ಸಿನಿಮಾ ಇದು. ಅರ್ಜುನ್ ಜನ್ಯ ಈ ಚಿತ್ರದ ಕಥೆ ಹೇಳಿದಾಗ ನೀವೆ ನಿರ್ದೇಶನ ಮಾಡಿ ಎಂದು ಹೇಳಿದ್ದೆ. ಈಗ ಈ ಹಾಡು ನೋಡಿದಾಗ ಅವರ ನಿರ್ದೇಶನದ ಬಗ್ಗೆ ತಿಳಿಯುತ್ತಿದೆ. ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂರು ಜನ ಈ ಚಿತ್ರದ ನಾಯಕರು. ಅಭಿನಯದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ” ಎಂದು ಶಿವರಾಜಕುಮಾರ್ ತಿಳಿಸಿದರು.
     “ಈ ಚಿತ್ರದ ಬಗ್ಗೆ ನನಗೆ ಆರಂಭದಿಂದಲೂ ಪ್ರೀತಿ. ಚಿತ್ರದ ಕುರಿತು ನಾನು ಅರ್ಜುನ್ ಜನ್ಯ ಅವರಿಗೆ ಕರೆ ಮಾಡಿ ಕೇಳುತ್ತಿರುತ್ತೇನೆ. ನಾನು ನೋಡಿ ಬೆಳೆದ ಇಬ್ಬರು ಕನ್ನಡ ಚಿತ್ರರಂಗದ ಮಹಾನ್ ನಟರ ಜೊತೆಗೆ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಅವರಿಬ್ಬರು ತೆರೆಯ ಮೇಲೆ ಒಟ್ಟಿಗೆ ಬಂದಾಗ ವಿಷಲ್ ಹಾಕಿ ಸಂಭ್ರಮಿಸಿದ್ದೇನೆ” ಎಂದು ರಾಜ್ ಬಿ ಶೆಟ್ಟಿ ಹೇಳಿದರು
     “ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದೇವೆ. ತೆರೆಯ ಮೇಲೆ ನೋಡಿದಾಗ ಹಾಡು‌ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ, ನಮ್ಮ ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ” ಎಂದರು ನಿರ್ಮಾಪಕ ರಮೇಶ್ ರೆಡ್ಡಿ.
WhatsApp Group Join Now
Telegram Group Join Now
Share This Article