ಸಂಚಾರಿ ಇ-ಚಲನ್ ಹಾಗೂ ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ

Ravi Talawar
ಸಂಚಾರಿ ಇ-ಚಲನ್ ಹಾಗೂ ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
????????????????????????????????????
WhatsApp Group Join Now
Telegram Group Join Now


ಬಳ್ಳಾರಿ,ನ.22: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಡಿಸೆಂಬರ್ 12 ರ ವರೆಗೆ ಈ ರಿಯಾಯಿತಿ ಸೌಲಭ್ಯವು ಇರಲಿದ್ದು, ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ಈ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Share This Article