ಬೆಂಗಳೂರು, ನವೆಂಬರ್ 12: ಕಳೆದ 1 ತಿಂಗಳಲ್ಲಿ 42 ಗಾಂಜಾ , ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ಪ್ರಕರಣ ಸಂಬಂಧ 10 ವಿದೇಶಿ ಪ್ರಜೆಗಳು ಸೇರಿ 64 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದರು.
ಸಿಸಿಬಿ ಅಧಿಕಾರಿಗಳ ವಿರುದ್ಧ ಕೇಳಿ ಬಂದಿರುವ ಆರೋಪ ವಿಚಾರವಾಗಿ ಮಾತನಾಡಿದ ಅವರು, ರೇವ್ ಪಾರ್ಟಿ ಕೇಸ್ನಲ್ಲಿ ತನಿಖೆ ನಡೆಸಿರುವ ಸಿಸಿಬಿ, ನ್ಯಾಯಾಲಯಕ್ಕೆ ಚಾರ್ಶಿಟ್ ಸಲ್ಲಿಕೆ ಮಾಡಿದೆ. ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ತನಿಖೆ ನಡೆಸಿದ ಅಧಿಕಾರಿಗಳ ವಿರುದ್ಧ ಆರೋಪಿಸಿ ದೂರುಗಳನ್ನು ನೀಡಿದ್ದಾರೆ. ಬಂದ ದೂರುಗಳ ತನಿಖೆಯನ್ನು ಬೇರೆ ಬೇರೆ ಸಂಸ್ಥೆಗಳು ನಡೆಸುತ್ತಿವೆ. ಆರೋಪಿಗಳು ತನಿಖೆಯ ದಿಕ್ಕು ತಪ್ಪಿಸಲು ಈ ರೀತಿ ಮಾಡಿದ್ದಾರೆ ಎಂದರು.