ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಖೈರಸೋಲ್ನಲ್ಲಿ ಖಾಸಗಿ ಒಡೆತನದ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಏಳು ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಸ್ಫೋಟದ ಬಳಿಕ ಭೂಕುಸಿತ ಸಂಭವಿಸಿದೆ. ಹೀಗಾಗಿ, ಕೆಲವರು ಗಣಿಗಳಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಮೃತರಲ್ಲಿ ಹೆಚ್ಚಿನವರು ಆದಿವಾಸಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಛಿದ್ರಗೊಂಡಿದ್ದವು. ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಕಲ್ಲಿದ್ದಲು ಉತ್ಖನನಕ್ಕೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು ಘಟನೆಗೆ ಕಾರಣ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು ಹೇಳಿದರು.