ಚಿಕ್ಕಬಳ್ಳಾಪುರ, (ಮೇ 28):ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಕನಿಂದ ಅತ್ಯಾಚಾರಕ್ಕೊಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.
ಚಿಕ್ಕಬಳ್ಳಾಪುರಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ ನಡೆಸಿದ್ದಾರೆ.