ಡಿ 20, 21ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

Ravi Talawar
ಡಿ 20, 21ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
WhatsApp Group Join Now
Telegram Group Join Now

ಮಂಡ್ಯ, ಡಿಸೆಂಬರ್​ 18: ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.

WhatsApp Group Join Now
Telegram Group Join Now
Share This Article