ಬೆಂಗಳೂರು ನಗರವೊಂದರಲ್ಲೇ 91 ಡೆಂಗ್ಯೂ ಪ್ರಕರಣಗಳು ಪತ್ತೆ

Ravi Talawar
ಬೆಂಗಳೂರು ನಗರವೊಂದರಲ್ಲೇ 91 ಡೆಂಗ್ಯೂ ಪ್ರಕರಣಗಳು ಪತ್ತೆ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 10: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ ಬೆಂಗಳೂರು ನಗರವೊಂದರಲ್ಲೇ 91 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ನಗರದಲ್ಲಿ ಡೆಂಘೀ ಪಾಸಿಟಿವ್ ಸಂಖ್ಯೆ 2,174ಕ್ಕೆ ಏರಿಕೆ ಆಗಿದೆ. ಆತಂಕದ ವಿಷಯವೆಂದರೆ, 24 ಗಂಟೆಯಲ್ಲಿ 82 ಮಕ್ಕಳು ಡೆಂಗ್ಯೂ ಸೋಂಕಿಗೆ ತುತ್ತಾಗಿದ್ದಾರೆ.

ಡೆಂಘೀ ಮಹಾಮಾರಿ ಶಿವಮೊಗ್ಗದಲ್ಲಿಯೂ ದಿಗಿಲು ಹುಟ್ಟಿಸಿದೆ. ನಿತ್ಯ ನೂರಾರು ಕೇಸ್​ಗಳು ದಾಖಲಾಗುತ್ತಿದ್ದು, ಪುಟಾಣಿಗಳನ್ನೇ ಬಲಿ ಪಡೆಯುತ್ತಿದೆ. ಹಾಸನ ಜಿಲ್ಲೆ ಬಳಿಕ ಶಿವಮೊಗ್ಗದಲ್ಲಿ ಇಸೀಗ ಮಹಿಳೆಯೊಬ್ಬರು ಡೆಂಘೀಯಿಂದ ಸಾವಿಗೀಡಾಗಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಶ್ಮಿ ಮೃತ ದುರ್ದೈವಿ. ಕಳೆದ 15 ದಿನದಿಂದ ತೀವ್ರ ಜ್ವರದಿಂದ ನರಳುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಡೆಂಗ್ಯೂ ಇದೀಗ ಸರ್ಕಾರವನ್ನೂ ನಡುಗುವಂತೆ ಮಾಡಿದೆ. ಐಎಎಸ್​​ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದ ಸಿಎಂ ಸಿದ್ದರಾಮಯ್ಯ, ಮಂಗಳವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article