ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ60 ರಷ್ಟು ಏರಿಕೆ

Ravi Talawar
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ60 ರಷ್ಟು ಏರಿಕೆ
WhatsApp Group Join Now
Telegram Group Join Now

ಬೆಂಗಳೂರು, ಜೂನ್​ 25: ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ 2023ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ60 ರಷ್ಟು ಏರಿಕೆಯಾಗಿದೆ. 2023ರ ಜೂನ್​ನಲ್ಲಿ ಒಟ್ಟು 2,003 ಪ್ರಕರಣಗಳು ವರದಿಯಾಗಿದ್ದವು. ಆದರೆ, ಈ ವರ್ಷ ಜೂನ್​ನಲ್ಲಿ​ 4886 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ  ವ್ಯಾಪ್ತಿಯಲ್ಲಿ 1,230 ಜನರಿಗೆ ಡೆಂಗ್ಯೂ ಬಂದಿದೆ.

ಬೆಂಗಳೂರಿನ ವಾತಾವರಣ ಆಗಾಗ ಬದಲಾಗುತ್ತಿದ್ದು ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ. ಸದ್ಯ ರಾಜ್ಯದಲ್ಲಿ ಶೇ60 ರಷ್ಟು ಜನರಿಗೆ ಡೆಂಗ್ಯೂ ಬಂದಿದೆ. ಇದರ ಜೊತೆಗೆ ಇತರ ಜ್ವರದ ಕೇಸ್​ಗಳು ಕೂಡ ಏರಿಕೆ ಕಂಡಿವೆ.

ರಾಜ್ಯದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿದೆ. ಅದರಲ್ಲೂ ರಾಜಧಾನಿಯಲ್ಲಿ ಕಳೆದ ತಿಂಗಳು ಮೇನಲ್ಲಿ 727 ಇದ್ದ ಡೆಂಗ್ಯೂ ಪ್ರಕರಣಗಳು ಕಳೆದ 20 ದಿನಗಳಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಜೂನ್ ತಿಂಗಳಿನಲ್ಲಿಯೇ ಡೆಂಗ್ಯೂ ಸಂಖ್ಯೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಜನವರಿಯಿಂದ ಸೋಮವಾರ (ಜೂ.24)ರ ವರೆಗೆ 2457 ಕೇಸ್ ಪತ್ತೆಯಾಗಿವೆ. ರಾಜ್ಯದಲ್ಲಿ ಜನವರಿಯಿಂದ ಜೂನ್20 ರವರೆಗೆ ಒಟ್ಟು 7343 ಕೇಸ್ ಪತ್ತೆಯಾಗಿವೆ. ಈ ಮೂಲಕ ಶೇ 60ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿವೆ.

 

WhatsApp Group Join Now
Telegram Group Join Now
Share This Article