ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ

Ravi Talawar
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್​, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಪಣಂಬೂರು, ಭಾಲ್ಕಿ, ಕೊಟ್ಟಿಗೆಹಾರ, ಚಿಕ್ಕಮಗಳೂರು, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

WhatsApp Group Join Now
Telegram Group Join Now
Share This Article