ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಚುನಾವಣೆ

Ravi Talawar
ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಚುನಾವಣೆ
WhatsApp Group Join Now
Telegram Group Join Now

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಬುಧವಾರ ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದ್ದು, ಇಂಡಿಯಾ ಬಣದ ಮಿತ್ರಪಕ್ಷವಾದ ತೃಣಮೂಲ ಕಾಂಗ್ರೆಸ್  ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸಿದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಸಂಸದ ಓಂ ಬಿರ್ಲಾ ಅವರನ್ನು ಸತತ ಎರಡನೇ ಅವಧಿಗೆ ಸ್ಪೀಕರ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದರೆ, ಎರಡೂ ಪಕ್ಷಗಳ ನಡುವಿನ ಮಾತುಕತೆ ವಿಫಲವಾದ ನಂತರ ಪ್ರತಿಪಕ್ಷಗಳು ಕೇರಳದಿಂದ ಎಂಟು ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡುವ ಮೂಲಕ ಒಮ್ಮತಕ್ಕೆ ತಲುಪಲು ವಿಫಲವಾಗಿ ಚುನಾವಣೆ ನಡೆಯುತ್ತಿದೆ.

ನಿನ್ನೆ ಸಂಜೆ ನಡೆದ ಇಂಡಿಯಾ ಬ್ಲಾಕ್ ಸಭೆಯಲ್ಲಿ ಟಿಎಂಸಿ ನಾಯಕರು ಸ್ಪೀಕರ್ ಆಯ್ಕೆಗೆ ವಿರೋಧ ಪಕ್ಷಗಳೊಂದಿಗೆ ಸಹಕರಿಸುವುದಾಗಿ ಹೇಳಿದ್ದಾರೆ. ಆದಾಗ್ಯೂ, ಅಂತಿಮ ನಿರ್ಧಾರವನ್ನು ಇಂದು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಟಿಎಂಸಿಯ ಡೆರೆಕ್ ಓ’ಬ್ರೇನ್, ಕಲ್ಯಾಣ್ ಬ್ಯಾನರ್ಜಿ, ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಮತ್ತು ಸಿಪಿಎಂನ ಕೆ ರಾಧಾಕೃಷ್ಣನ್ ಸೇರಿದಂತೆ ಇಂಡಿಯಾ ಬ್ಲಾಕ್‌ನ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತಮ್ಮ ಸಂಸದರಿಗೆ ಚುನಾವಣೆಗಾಗಿ ವಿಪ್ ಜಾರಿಗೊಳಿಸಿದ್ದರೆ, ಹೆಚ್ಚಿನ ಸಮಾಲೋಚನೆಗಳ ನಂತರ ನಾಳೆ ತಮ್ಮ ನಿರ್ಧಾರವನ್ನು ತಿಳಿಸುವುದಾಗಿ ಟಿಎಂಸಿ ಹೇಳಿದೆ. ಆದರೆ ಸ್ಪೀಕರ್ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿಂದೆ ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ ಅವರು, ಸಮಾಲೋಚನೆ ನಡೆಸದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಂಗ್ರೆಸ್ ಏಕಪಕ್ಷೀಯವಾಗಿ ಕೆ ಸುರೇಶ್ ಅವರನ್ನು ಇಂಡಿಯಾ ಬ್ಲಾಕ್ ಅಭ್ಯರ್ಥಿಯನ್ನಾಗಿ ಹಾಕಲು ನಿರ್ಧರಿಸಿದೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಮತ್ತು ಡಿಎಂಕೆಯ ಟಿ ಆರ್ ಬಾಲು ಮತ್ತು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಸಂಸತ್ತಿನಲ್ಲಿ ರಾಜನಾಥ್ ಸಿಂಗ್ ಅವರ ಕಚೇರಿಯಲ್ಲಿ ಒಮ್ಮತಕ್ಕೆ ಬರಲು ನಡೆಸಿದ ಸಂವಾದವು ಉಭಯ ಪಕ್ಷಗಳು ತಮ್ಮ ತಮ್ಮ ನಿಲುವಿಗೇ ಅಂಟಿಕೊಂಡಿದ್ದರಿಂದ ಒಮ್ಮತಕ್ಕೆ ಬರುವಲ್ಲಿ ವಿಫಲವಾಯಿತು.

 

 

WhatsApp Group Join Now
Telegram Group Join Now
Share This Article