ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ: ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ

Ravi Talawar
ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ: ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ
WhatsApp Group Join Now
Telegram Group Join Now

ಬೆಳಗಾವಿ, ಜೂನ್​ 26: ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಅಭಿವೃದ್ಧಿ ಕೆಲಸ ಮಾಡಲು ಸಹಜವಾಗಿ ದರ ಏರಿಕೆ ಆಗುತ್ತದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ  ಹೇಳಿದರು. ಬೆಳಗಾವಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ತೆರಿಗೆ ಹಾಕದೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದರು.

ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಅಂತ ಪ್ರಶ್ನೆ ಮಾಡಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್​ಗೆ ಹೆಚ್ಚುವರಿಯಾಗಿ 50 ಎಂಎಲ್​​ ಹಾಲು ನೀಡುತ್ತಿರುವುದರಿಂದ 2 ರೂ. ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಣಿಕೆ ನೀಡಲು ದರ ಏರಿಕೆ ಮಾಡಲಾಗಿಎ ಎಂಬ ಪ್ರತಿಪಕ್ಷಗಳ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಿದಾಗ ಎಷ್ಟು ಕೊಟ್ಟಿದೆ? BJP ಅಧಿಕಾರದಲ್ಲಿದ್ದಾಗ ಬಿಎಸ್​ ಯಡಿಯೂರಪ್ಪ ಎಷ್ಟು ಕೊಟ್ಟಿದ್ದಾರೆ, ನಾವು ಬಿಜೆಪಿ ರೀತಿ ಮಾಡಿಲ್ಲ ಎಂದು ಟಾಂಗ್​ ಕೊಟ್ಟರು.

 

WhatsApp Group Join Now
Telegram Group Join Now
Share This Article