ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಜಾರ್ಖಂಡ್‌ ಪತ್ರಕರ್ತನ ಬಂಧನ

Ravi Talawar
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಜಾರ್ಖಂಡ್‌ ಪತ್ರಕರ್ತನ ಬಂಧನ
WhatsApp Group Join Now
Telegram Group Join Now

ದೆಹಲಿ ಜೂನ್ 29: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಶನಿವಾರ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ.

ಈತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಪ್ರಶ್ನೆ ಪತ್ರಿಕೆ  ಸೋರಿಕೆಯಲ್ಲಿ ಪಾತ್ರವಹಿಸಿದ್ದಾರೆ ಎಂಬ ಶಂಕೆಯಲ್ಲಿ ಬಂಧಿಸಲಾಗಿದೆ. ಆಲಂ ಅವರನ್ನು ಎನ್‌ಟಿಎ ವೀಕ್ಷಕರಾಗಿ ಮತ್ತು ಓಯಸಿಸ್ ಶಾಲೆಯ ಕೇಂದ್ರ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸೋರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಇನ್ನೂ ಐದು ಜನರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದರು.

ಮೇ 5 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ನೀಟ್ ಪರೀಕ್ಷೆಗೆ ಪ್ರಾಂಶುಪಾಲರು ಹಜಾರಿಬಾಗ್ ಜಿಲ್ಲಾ ಸಂಯೋಜಕರಾಗಿದ್ದರು. ಗುಜರಾತ್‌ನಲ್ಲಿ ಸಿಬಿಐ ತಂಡಗಳು ಗೋದ್ರಾ, ಖೇಡಾ, ಅಹಮದಾಬಾದ್ ಮತ್ತು ಆನಂದ್‌ನ 7 ಸ್ಥಳಗಳಲ್ಲಿ ಕೆಲವು ಶಂಕಿತರ ಮೇಲೆ ಶೋಧ ನಡೆಸುತ್ತಿವೆ. ಇದು ಗೋಧ್ರಾ ಪೊಲೀಸರು ಈ ಹಿಂದೆ ತನಿಖೆ ನಡೆಸಿದ ಎಫ್‌ಐಆರ್‌ಗೆ ಸಂಬಂಧಿಸಿದೆ.

ಜೂನ್ 27 ರಂದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯ ಭಾಗವಾಗಿ ಸಿಬಿಐ ಪ್ರಕರಣದಲ್ಲಿ ತನ್ನ ಮೊದಲ ಬಂಧನವನ್ನು ಮಾಡಿತ್ತು. ಅಧಿಕಾರಿಗಳ ಪ್ರಕಾರ, ಪಾಟ್ನಾದ ಇಬ್ಬರು ಬಂಧಿತ ಆರೋಪಿಗಳಾದ ಅಶುತೋಷ್ ಕುಮಾರ್ ಮತ್ತು ಮನೀಶ್ ಕುಮಾರ್ ಅವರು ಪರೀಕ್ಷೆಗೆ ಹಾಜರಾಗಿದ್ದ ಕೆಲವರನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ದು  ಅಲ್ಲಿ ಸೋರಿಕೆಯಾದ ನೀಟ್ ಪ್ರಶ್ನೆ ಪತ್ರಿಕೆ ಮತ್ತು ಉತ್ತರ  ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 23 ರಂದು  ಸಿಬಿಐ ಮೊದಲ  ಎಫ್‌ಐಆರ್ ದಾಖಲಿಸಿತ್ತು. ಶಿಕ್ಷಣ ಸಚಿವಾಲಯವು ಪರೀಕ್ಷೆಯ ನಿರ್ವಹಣೆಯಲ್ಲಿನ ಅಕ್ರಮಗಳ ತನಿಖೆಯನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವುದಾಗಿ ಘೋಷಿಸಿದ ಒಂದು ದಿನದ ನಂತರ ಈ ಬಂಧನ ನಡೆದಿದೆ.

NEET-UG ಅನ್ನು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಎನ್‌ಟಿಎ ನಡೆಸುತ್ತದೆ. ಸರ್ಕಾರವು ‘ಮುನ್ನೆಚ್ಚರಿಕೆ ಕ್ರಮ’ವಾಗಿ NEET-PG ಪರೀಕ್ಷೆಯನ್ನು ಮುಂದೂಡಿದೆ.

WhatsApp Group Join Now
Telegram Group Join Now
Share This Article