ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ 48 ಗಂಟೆ ಯೆಲ್ಲೋ ಅಲರ್ಟ್

Ravi Talawar
ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ 48 ಗಂಟೆ ಯೆಲ್ಲೋ ಅಲರ್ಟ್
WhatsApp Group Join Now
Telegram Group Join Now

ಬೆಂಗಳೂರು: ಮುಂಗಾರು ಮಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದುವರೆದಿದ್ದು, ಇಂದು ಮತ್ತು ನಾಳೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೂ ಕೂಡ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗ 30 ರಿಂದ 40 ಪ್ರತಿ ಕಿಲೋಮೀಟರ್ ವೇಗದಲ್ಲಿ ಇರಲಿದ್ದು, ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

WhatsApp Group Join Now
Telegram Group Join Now
Share This Article